ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.

ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಬೆಂಗಳೂರಿನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದು, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಹಿರಂಗಪಡಿಸಿದ್ದಾರೆ.

ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಡೆತ್ ನೋಟ್ ನಲ್ಲಿ ಹೇಳಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣ ನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

No Comments

Leave A Comment