Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಶಾರ್ಟ್‌ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿ ಬೆಂಕಿಗಾಹುತಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

ರಾಯಚೂರು: ನಗರದ ಮಹಾವೀರ ಚೌಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ.

ರಾಯಚೂರಿನ ಆರ್.ಕೆ ಭಂಡಾರಿ ‌ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಆವರಿಸಿದ್ದು ಸುತ್ತಮುತ್ತಲಿನ ಅಂಗಡಿಗಳ ವ್ಯಾಪಾರಸ್ಥರು ಸಹ ಆತಂಕಕ್ಕೆ ಒಳಗಾಗಿದ್ದರು. ಈ ಘಟನೆ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

No Comments

Leave A Comment