ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಹವಾಮಾನ ವೈಪರಿತ್ಯಕ್ಕೆ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ

ವಾಷಿಂಗ್ಟನ್, ಮೇ 29: ಹವಾಮಾನದಲ್ಲಿ ಉಂಟಾದ ಭಾರೀ ವೈಪರಿತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಹಾಗೂ 500ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ ಎಂದು ವರದಿಯಾಗಿದೆ.

ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ 700ಕ್ಕೂ ಹೆಚ್ಚು ವಿಮಾನಗಳ ಮೇಲೆ ಪರಿಣಾಮ ಉಂಟುಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಮಾನಯಾನ ಸಂಸ್ಥೆಯು ವಿಡಿಯೋವೊಂದನ್ನು ಹಂಚಿಕೊಂಡಿದೆ. ಇದರಲ್ಲಿ ಗಂಟೆಗೆ 80 ಕಿಮೀ ವೇಗದಲ್ಲಿ ಬೀಸುತ್ತಿದ್ದ ಗಾಳಿಯ ರಭಸದಿಂದ ಅಮೇರಿಕನ್ ಏರ್‌ಲೈನ್ಸ್‌ ನ ವಿಮಾನವೊಂದು ಆಟಿಕೆಯಂತೆ ತಿರುಗುತ್ತಿರುವುದನ್ನು ಕಾಣಬಹುದಾಗಿದೆ.

ಹವಾಮಾನ ಪರಿಸ್ಥಿತಿಯ ಬಗ್ಗೆ ಎನ್‌ಡಬ್ಲ್ಯೂಎಸ್ ಫೋರ್ಟ್ ವರ್ತ್ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದರಲ್ಲಿ ಡಲ್ಲಾಸ್-ಫೋರ್ಟ್ ವರ್ತ್ ಮೂಲಕ ಪೂರ್ವ ಟೆಕ್ಸಾಸ್‌ನತ್ತ ತೀವ್ರ ಚಂಡಮಾರುತ ಹಾಗೂ ಬಿರುಗಾಳಿಯು ಬೀಸಿದೆ. ಸುಮಾರು 3 ಸೆ.ಮೀ ನಷ್ಟು ಆಲಿಕಲ್ಲು ಸಹಿತ ಮಳೆ ಸುರಿದಿದೆ. ಇನ್ನು ಮುಂದಿನ ಕೆಲ ಗಂಟೆಗಳ ಸಮಯ 2 ಸೆ.ಮೀ ನಷ್ಟು ಮಳೆಯಾಗುವ ಸಂಭವವಿದೆ. ಹೀಗಾಗಿ ಪ್ರವಾಹ ಕೂಡ ಉಂಟಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಈ ವೇಳೆ ವಿಮಾನಗಳ ಹಾರಾಟ ಸ್ಥಗಿತಗೊಳಿಸುವಂತೆ ತಿಳಿಸಿದೆ.

No Comments

Leave A Comment