ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

Prajwal Revanna ಲೈಂಗಿಕ ದೌರ್ಜನ್ಯ ಕೇಸು: ಜೂನ್. 6ರವರೆಗೆ SIT ಕಸ್ಟಡಿಗೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಿತು.

ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ-ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.

ಲೋಕಸಭೆ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆಯಷ್ಟೇ ಮ್ಯೂನಿಚ್ ನಿಂದ ವಾಪಸ್ಸಾದ ಕೂಡಲೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ವಿಚಾರಣೆಗೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಸ್ ಐಟಿ ಪರ ನ್ಯಾಯವಾದಿಗಳು ಮತ್ತು ಪ್ರಜ್ವಲ್ ಪರ ವಕೀಲ ಅರುಣ್ ಮಂಡಿಸಿದ ವಾದ-ವಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗಾಗಿ ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೊಪ್ಪಿಸಿದರು.

ಸದ್ಯದಲ್ಲಿಯೇ ಪ್ರಜ್ವಲ್‌ಗೆ ಪುರುಷ ಸಾಮರ್ಥ್ಯ ಪರೀಕ್ಷೆ ನಡೆಸಲು ಎಸ್‌ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

kiniudupi@rediffmail.com

No Comments

Leave A Comment