ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಎಸ್‌ಐಟಿ ನೋಟಿಸ್; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ.

‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ನೀವು ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಹಾಸನ ಸಂಸದ, ಮತ್ತು ತಮ್ಮ ಮಗ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಎಚ್‌ಡಿ ರೇವಣ್ಣ ಅವರನ್ನು ಏಪ್ರಿಲ್ 29 ರಂದು ಬಂಧಿಸಲಾಗಿತ್ತು. ಬಳಿಕ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ರೇವಣ್ಣ ಮತ್ತು ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮನೆ ಕೆಲಸದಾಕೆಯ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈಮಧ್ಯೆ, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು 24 ಗಂಟೆಗಳ ಒಳಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಬಂಧಿಸಿರುವ ಹಿನ್ನೆಲೆಯಲ್ಲಿ ಅವರು ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅನೂರ್ಜಿತಗೊಳಿಸುವ ನಿರೀಕ್ಷೆಯಿದೆ.

ಮೈಸೂರಿನ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಜಾಮೀನು ಪ್ರಶ್ನಿಸಿ ಎಸ್ಐಟಿ ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಎಸ್‌ಐಟಿ ಪ್ರಕಾರ, ಈ ತನಿಖೆ ಮುಗಿಯುವವರೆಗೆ ರೇವಣ್ಣ ಕಸ್ಟಡಿಯಲ್ಲಿ ಮುಂದುವರಿಯಬೇಕು. ಹೀಗಾಗಿ ಜಾಮೀನು ರದ್ದುಗೊಳಿಸುವಂತೆ ಎಸ್‌ಐಟಿ ಹೈಕೋರ್ಟ್‌ಗೆ ಮನವಿ ಮಾಡಿದೆ.

kiniudupi@rediffmail.com

No Comments

Leave A Comment