ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: 28 ದಿನಗಳಲ್ಲಿ 74,915 ಪ್ರಕರಣ ದಾಖಲು!

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಕಳೆದ 28 ದಿನಗಳಲ್ಲಿ ಒಟ್ಟು 74,915 ಪ್ರಕರಣಗಳು ದಾಖಲಾಗಿದ್ದು, 118 ಕಿ.ಮೀ ಉದ್ದದ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿದಿವೆ.

ಹೆಚ್ಚಿನ ಚಾಲಕರು, ಸಹ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸದೆ ಇರುವುದು ಕಂಡು ಬಂದಿದೆ. 57,057 ಪ್ರಕರಣಗಳು ಸೀಟ್ ಬೆಲ್ಟ್ ಧರಿಸದೆ ಇರುವುದು, 10,945 ಅತಿವೇಗದ ಪ್ರಕರಣಗಳು 6,046 ಲೇನ್ ಉಲ್ಲಂಘನೆ ಪ್ರಕರಣಗಳು ಮತ್ತು 494 ಪ್ರಕರಣಗಳು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ ಪ್ರಕರಣಗಳಾಗಿವೆ.

ಅಪಘಾತ ಹೆಚ್ಚಳದಿಂದಾಗಿ ಮತ್ತು NH-275 ನಲ್ಲಿ ಸಂಚಾರ ಉಲ್ಲಂಘನೆಗಳನ್ನು ತಡೆಯಲು ಪೊಲೀಸರು AI ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳನ್ನು ಪ್ರತಿ ದಿಕ್ಕಿನಲ್ಲಿ ಆರು ಸ್ಥಳಗಳಲ್ಲಿ ಅಳವಡಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೂಡ ಪ್ರತಿ ದಿಕ್ಕಿನಲ್ಲಿಯೂ ಐದು ಇತರ ಸ್ಥಳಗಳಲ್ಲಿ ವೀಡಿಯೊ ಕ್ಯಾಮೆರಾಗಳನ್ನು ಅಳವಡಿಸಿದೆ. 100 kmph ವೇಗದ ಮಿತಿಯನ್ನು ನಿಗದಿಪಡಿಸಿದೆ. ಈ ರೆಸಲ್ಯೂಶನ್ ಕ್ಯಾಮೆರಾಗಳಿಂದ ಸಂಚಾರ ಉಲ್ಲಂಘನೆಗಳು ಸ್ಪಷ್ಟವಾಗಿ ತಿಳಿದುಬರುತ್ತಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಮಾತನಾಡಿ, ಕೇವಲ 28 ದಿನಗಳಲ್ಲಿ 74,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ರಸ್ತೆ ಸುರಕ್ಷತೆಯ ಬಗ್ಗೆ ಜನರ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದರಿಂದ ಅವರ ಪ್ರಾಣಕ್ಕಷ್ಟೇ ಅಲ್ಲದೆ, ಇತರರ ಪ್ರಾಣಕ್ಕೂ ಸಂಚಕಾರ ತರುತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದರೂ ಅಪಘಾತ ಪ್ರಕರಣಗಳ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ, ಚಾಲಕರ ಫೋನ್‌ಗಳಿಗೆ ನಿಯಮ ಉಲ್ಲಂಘನೆ ಮಾಡಿದ ಕೂಡಲೇ ನೈಜ-ಸಮಯದ ಸಂದೇಶ ರವಾನಿಯಾಗುವ ವ್ಯವಸ್ಥೆಗಳು ಬರಲಿವೆ. ಇದರಿಂದ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ನಿಯಮ ಉಲ್ಲಂಘಿಸುವವರ ವಾಹನಗಳು ಟೋಲ್‌ಗಳಿಂದ ನಿರ್ಗಮಿಸಿದಾಗ ಅವರ ಫಾಸ್ಟ್‌ಟ್ಯಾಗ್ ಖಾತೆಯ ಮೂಲಕ ದಂಡವನ್ನು ತಕ್ಷಣವೇ ಕಡಿತಗೊಳಿಸಲಾಗುತ್ತದೆ. ಈ ಕಾರ್ಯವಿಧಾನವು ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಯನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

No Comments

Leave A Comment