ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೇರಳ, ಮೇ.31: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ.
ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಸುರಭಿ ಗಗನಸಖಿಯಾಗಿದ್ದಳು.
ಆಕೆಯ ಗುದನಾಳದಲ್ಲಿ ಸುಮಾರು 960 ಗ್ರಾಂ ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಸುರಭಿ ಖತುನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು .ಬಳಿಕ ಸುರಭಿಯನ್ನ 14 ದಿನಗಳ ಕಸ್ಟಡಿಗೆ ನೀಡಲಾಗಿದೆ.