ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಗುದನಾಳದಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟು ಕಳ್ಳ ಸಾಗಾಟ- ಗಗನಸಖಿ ಅರೆಸ್ಟ್‌

ಕೇರಳ, ಮೇ.31: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ.

ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್​​ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಸುರಭಿ ಗಗನಸಖಿಯಾಗಿದ್ದಳು.

ಆಕೆಯ ಗುದನಾಳದಲ್ಲಿ ಸುಮಾರು 960 ಗ್ರಾಂ ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಸುರಭಿ ಖತುನ್ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು .ಬಳಿಕ ಸುರಭಿಯನ್ನ 14 ದಿನಗಳ ಕಸ್ಟಡಿಗೆ ನೀಡಲಾಗಿದೆ.

No Comments

Leave A Comment