ಪೆನ್ಡ್ರೈವ್ ಹಂಚಿಕೆ ಕೇಸ್; ಆರೋಪಿಗಳಾದ ನವೀನ್ ಗೌಡ , ಚೇತನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದನವೀನ್ ಗೌಡ ಹಾಗೂ ಚೇತನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿದ್ದರು.