ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ.
ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.
ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆನ್ನಲಾಗಿದೆ.
ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇನ್ನು ಮತ್ತೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.