ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿ ಫಾರಂ ನೀಡಿದರು. ನಂತರ ಪಕ್ಷದ ಮುಖಂಡರ ಸಮ್ಮುಖದಲ್ಲಿ ಯತೀಂದ್ರ ನಾಮಪತ್ರ ಸಲ್ಲಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ನಿನ್ನೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.