Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕೃಷಿ ಖಾತೆಗಾಗಿ ಬೇಡಿಕೆ ಮುಂದಿಟ್ಟ ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ, ಜೂ. 05: ಮಂಡ್ಯ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಎನ್‌ಡಿಎ ಸಭೆ ಹಿನ್ನೆಲೆ ದೆಹಲಿಗೆ ತೆರಳಿದ್ದು, ಅವರು ಕೃಷಿ ಖಾತೆಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆದ ಬಳಿಕ ಎಲ್ಲವೂ ನಿರ್ಧಾರವಾಗಲಿದೆ. ಈ ಹಂತದಲ್ಲಿ ಯಾವುದೇ ರೀತಿ ನೆಗೆಟಿವ್ ಆದ ನಿರ್ಧಾರ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಮಾಡುವುದಿಲ್ಲ ಎಂದೆನಿಸುತ್ತದೆ. ನನ್ನ ಪ್ರಕಾರ ಅವರು ಯಾವುದೇ ನೆಗೆಟಿವ್ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದುಕೊಂಡಿದ್ದೇನೆ ಎಂದರು.

ನಮ್ಮ ಡಿಮ್ಯಾಂಡ್ ಏನಿಲ್ಲ. ಹಲವಾರು ಸಮಸ್ಯೆ ಎದುರಿಸುತ್ತೇವೆ. ನಮ್ಮ ಮೊದಲ ಆದ್ಯತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಬೇಕು. ನಮ್ಮ ಪಕ್ಷದ ಪ್ರಮುಖ ಆಸಕ್ತಿ ಇರೋದು ರೈತರಿಗೆ ಸಹಾಯ ಮಾಡಬೇಕು ಅನ್ನೋದು. ಏನು ತೀರ್ಮಾನ ಆಗುತ್ತೆ ಎಂದು ಕಾದುನೋಡೋಣ ಎಂದು ಹೇಳಿದರು.

ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂದು ಬಿಜೆಪಿ ನಾಯಕರಿಗೆ ತಿಳಿದಿದೆ. ಅದರ ಅನುಸಾರ ಸಚಿವ ಸ್ಥಾನ ನೀಡುವ ನಿರ್ಧಾರವಾಗಲಿದೆ. ದೇಶಕ್ಕೆ ಇಂಡಿಯಾ ಮೈತ್ರಿಕೂಟ ಒಳ್ಳೆಯದಲ್ಲ. ದೇಶದ ಅಭಿವೃದ್ಧಿಗೆ ಇಂಡಿಯಾ ಮೈತ್ರಿಕೂಟದಿಂದ ಅನುಕೂಲ ಇಲ್ಲ ಎಂದು ಹೇಳಿದರು. ಇರೋದು ರೈತರಿಗೆ ಸಹಾಯ ಮಾಡಬೇಕು ಅನ್ನೋದು. ನೋಡೋಣ ಏನು ತೀರ್ಮಾನ ಆಗುತ್ತೆ ಎಂದು ತಿಳಿಸಿದರು.

No Comments

Leave A Comment