ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಎಸ್ಐಟಿ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನಾಯಾಧೀಶ ಕೆ.ಎಂ. ಶಿವಕುಮಾರ್ ಅವರು ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿಯನ್ನು ಜೂನ್ 10 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿ ಆದೇಶ ಮಾಡಿತ್ತು.

No Comments

Leave A Comment