ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ದೆಹಲಿ: ಕೇಜ್ರಿವಾಲ್ ನಿವಾಸದಲ್ಲಿ ಎಎಪಿ ಶಾಸಕರಿಂದ ‘ತುರ್ತು ಸಭೆ’; ಹೊಸ ಮುಖ್ಯಮಂತ್ರಿ ಘೋಷಿಸುವ ಸಾಧ್ಯತೆ

ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ ‘ತುರ್ತು’ ಸಭೆ ಕರೆದಿದೆ.

ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಹೊಸ ಮುಖ್ಯಮಂತ್ರಿಯನ್ನು ಘೋಷಿಸಬಹುದು.

ಜನವರಿ 2025 ರ ಅಂತ್ಯದ ವೇಳೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಎಪಿ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಮೈತ್ರಿ ಮಾಡಿಕೊಂಡರೂ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿರುವ ಎಎಪಿ ಮತ್ತು ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡೆಸಿದ ಬಿರುಸಿನ ಚುನಾವಣಾ ಪ್ರಚಾರದ ನಂತರವೂ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಎಪಿ ಕಠಿಣ ಹೋರಾಟ ಮಾಡುವಲ್ಲಿ ವಿಫಲವಾಗಿದೆ.

ಆದರೆ, ಈ ಫಲಿತಾಂಶ ಬಿಜೆಪಿಗೆ ಸಂದೇಶವನ್ನೂ ನೀಡಿದೆ. ನಗರ ಸ್ಥಾನಗಳಲ್ಲಿ ಪಕ್ಷವು ಮುನ್ನಡೆದಿದ್ದರೂ, ಎಲ್ಲಾ ಏಳರಲ್ಲಿ ವಿಜಯದ ಅಂತರವು ಗಮನಾರ್ಹವಾಗಿ ಕಡಿಮೆಯಾಗಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚು ಸ್ಪರ್ಧಾತ್ಮಕ ರಾಜಕೀಯ ಚಿತ್ರಣವನ್ನು ಸೂಚಿಸುತ್ತದೆ.

No Comments

Leave A Comment