Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

40% ಕಮಿಷನ್ ಆರೋಪ: ಕಾಂಗ್ರೆಸ್ ನಾಯಕ Rahul Gandhiಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು. ಈ ವೇಳೆ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಬಾಂಡ್ ಗೆ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಸಹಿ ಮಾಡಿದ್ದಾರೆ ಎನ್ನಲಾಗಿದೆ. ಅಂತೆಯೇ ನ್ಯಾಯಾಲಯ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿಕೆ ಮಾಡಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಈ ಸಂಬಂಧ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಳೆದ ವಿಚಾರಣೆಗಳಲ್ಲಿ ಖುದ್ದು ಹಾಜರಿಯಿಂದ ವಿನಾಯ್ತಿ ಪಡೆದಿದ್ದ ರಾಹುಲ್ ಬೆಳಗ್ಗೆ 10.50ಕ್ಕೆ ಕೋರ್ಟ್ ಗೆ ಹಾಜರಾದರು. ವಿಚಾರಣೆ ಮುಕ್ತಾಯವಾಗುತ್ತಲೇ ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ವಿಚಾರಣೆ ಮುಗಿಸಿ ವಾಪಸ್ ತೆರಳಿದ್ದಾರೆ.

ಏನಿದು ಪ್ರಕರಣ?

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ನ್ಯಾ. ಕೆ.ಎನ್‌. ಶಿವಕುಮಾರ್‌ ಅವರು ಜೂನ್‌ 7ರಂದು ತಪ್ಪದೆ ವಿಚಾರಣೆಗೆ ಹಾಜರಾಗಬೇಕು ಎಂದು ರಾಹುಲ್‌ ಅವರಿಗೆ ನಿರ್ದೇಶನ ನೀಡಿತ್ತು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಜೂನ್‌ 1ರಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ, ಕಾಂಗ್ರೆಸ್‌ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್‌ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ’ ಎಂದು ಆರೋಪಿಸಿದ್ದರು.

‘ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳಾಗಿದ್ದಾರೆ.

No Comments

Leave A Comment