ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ ಮೂಲದವರೆಂದು ತಿಳಿದುಬಂದಿದೆ. ಜೂನ್‌ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್‌ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್‌ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment