``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮಹಿಳೆಯ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣ ಕಾರು ಚಾಲಕನ ಬಂಧನ

ಬೆಂಗಳೂರು, ಜೂ. 07; ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದರ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್‌ನನ್ನೂ ಎಸ್‌ಐಟಿ ಬಂಧಿಸಿರುವುದಾಗಿ ತಿಳಿದುಬಂದಿದೆ.

ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿರುವ ಮಾಹಿತಿ ಆಧಾರದ ಮೇರೆಗೆ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ಆತನಿಗಾಗಿ ಹುಡುಗಾಟ ನಡೆಸಿದ್ದರು. ಬಳಿಕ ಅಜಿತ್‌ನನ್ನು ಬಂಧಿಸಿದ್ದರು.

ಅಜಿತ್ ಮೇಲೆ ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ, ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿದೆ. ಇನ್ನು ಅಜಿತ್ ಭವಾನಿ ರೇವಣ್ಣ ಅವರ ಸೂಚನೆಯ ಮೇರೆಗೆ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದಿದ್ದ ಎನ್ನಲಾಗಿದೆ. ಬಳಿಕ ಅಪಹರಣದ ಕುರಿತಂತೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ದೂರಿನ ಅನ್ವಯ ಚಾಲಕ ಅಜಿತ್ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.

ಮತ್ತೊಂದೆಡೆ, ಪ್ರಕರಣದಲ್ಲಿ 20ಕ್ಕೂ ಹೆಚ್ಚು ದಿನಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಇಂದು ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಅವರು, ಎಸ್‌ಐಟಿ ವಿಚಾರಣೆಗೆ ಹಾಜರಾದರು. ಇದೀಗ ಭವಾನಿ ಅವರು ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅಜಿತ್‌ನನ್ನು ಬಂಧಿಸಿದ್ದಾರೆ.

No Comments

Leave A Comment