ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ: ಡಾ.ಧನಂಜಯ ಸರ್ಜಿಗೆ ಭರ್ಜರಿ ಗೆಲುವು
ಮೈಸೂರು: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ.
ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್‍ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು.
ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.
ಕಾಂಗ್ರೇಸ್‍ನ ಆಯನೂರು ಮಂಜುನಾಥ್ 13516 , ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 7039, ಎಸ್ ಪಿ ದಿನೇಶ್ 2518 ಮತಗಳನ್ನು ಪಡೆದರು.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ.
ಒಟ್ಟು 66497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು. ಮಿಕ್ಕ ಮತಗಳು ತಿರಸ್ಕತವಾಗಿದ್ದವು.
ಭರ್ಜರಿ ಗೆಲುವು ಕಂಡ ಡಾ.ಧನಂಜಯ ಸರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮುಖಂಡರು ಸಹಿತ ಕಾರ್ಯಕರ್ತರು ಮೈಸೂರಿನ ಮತಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.