ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾಪು: ಯುವಕ ನಾಪತ್ತೆ : ದ್ವಿಚಕ್ರವಾಹನ ಮೊಬೈಲ್, ಪರ್ಸ್ ಕಡಲ ತೀರದಲ್ಲಿ ಪತ್ತೆ
ಕಾಪು: ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್‌ನಲ್ಲಿ ಅವನ ಮೊಬೈಲ್ ಮತ್ತು ಮೊಬೈಲ್, ಪರ್ಸ್ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.