Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮುಂದಿನ 5 ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸ್ಪಷ್ಟನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ 5 ದಿನಗಳ ಕಾಲ ಮುಂದುವೆರೆಯಲಿದೆ ಎಂದು ಎಚ್ಚರಿಕೆ ನೀಡಿದೆ.

ಮುಂದಿನ 3 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬಾಗಲಕೋಟೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ಬಿಜಾಪುರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜೂನ್ 6 ರಿಂದ 8 ರವರೆಗೆ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

 2ದಿನ ಭಾರಿ ಮಳೆ

ಇಂದು ಮತ್ತು ನಾಳೆ ಅಂದರೆ ಜೂನ್‌ 8 ಮತ್ತು 9ರಂದು ಭಾರೀ ಮಳೆ ಹಿನ್ನೆಲೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತುಬ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ ಮೇ 9ರಂದು ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

No Comments

Leave A Comment