Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಚುನಾವಣೆಯಲ್ಲಿ ಸೋತರೂ ಅಣ್ಣಾಮಲೈಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ

ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು livemint.com ವರದಿ ಮಾಡಿದೆ.

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ವೇಳೆ ಕುಮಾರಸ್ವಾಮಿ ಸಹಿತ ಹಲವು ನಾಯಕರು ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಣ್ಣಾಮಲೈ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡ ನಂತರ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಾಜಿ IPS ಅಧಿಕಾರಿ ಅಣ್ಣಾಮಲೈ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ, ದ್ರಾವಿಡ ಮುನ್ನೇತ್ರ ಕಳಗಂ (DMK) ಅಭ್ಯರ್ಥಿ ಗಣಪತಿ ರಾಜ್‌ಕುಮಾರ್‌ಗೆ ವಿರುದ್ಧ ಸೋತಿದ್ದಾರೆ. 2019 ರಲ್ಲಿ ಬಿಜೆಪಿ ಸೇರಿದ ಅಣ್ಣಾಮಲೈ 2021 ರಲ್ಲಿ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರಾದರು.

No Comments

Leave A Comment