Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಮಲಾವಿಯ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ!

ಮಲಾವಿ, ಜೂ. 11:ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು   ಪ್ರಯಾಣಿಸುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಿಎನ್ ಎನ್ ವರದಿ ಮಾಡಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಉತ್ತರ ಲಿಲಾಂಗ್ವೆನಿಂದ ಸುಮಾರು 380 ಕಿಲೋ ಮೀಟರ್ ದೂರದಲ್ಲಿರುವ ಮುಝುಜು ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣದಲ್ಲಿ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ತಿಳಿಸಿದ್ದಾರೆ.

ವಿಮಾನ ರಾಡಾರ್ ಸಂಪರ್ಕಕ್ಕೆ ಸಿಗದೇ ಇದ್ದು, ನಾಪತ್ತೆಯಾಗಿರುವ ವಿಮಾನ ಪತ್ತೆಗಾಗಿ ಎಲ್ಲಾ ರೀತಿಯ ಶ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷರ ಕಚೇರಿಯ ಪ್ರಕಟನೆ ವಿವರಿಸಿದೆ.

ಮಲಾವಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಪ್ರಯಾಣಿಕರ ಶೋಧಕ್ಕಾಗಿ ದೇಶೀಯ ಹಾಗೂ ಅಂತಾರಾಷ್ಟ್ರೀ ಯ ಏಜೆನ್ಸಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

No Comments

Leave A Comment