ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಚಿತ್ರದುರ್ಗ, ಜೂನ್ 12: ನಟ ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಚಿತ್ರದುರ್ಗದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಾಲಯದಿಂದ ಡಿಸಿ ಕಚೇರಿವರೆಗೂ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಮೌನ ಪ್ರತಿಭಟನೆ ಮಾಡಲಾಗಿದೆ. ಹಲವು ಸಂಘಟನೆಯ ಮುಖಂಡರು ಮತ್ತು ಸ್ಥಳಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.