ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್

ಕೊಚ್ಚಿ: ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

ಗುರುವಾರ ಕುವೈತ್‌ಗೆ ಧಾವಿಸಿದ ಕೇಂದ್ರ ರಾಜ್ಯ ಸಚಿವ ಸಿಂಗ್ ವಿಕೆ ಸಿಂಗ್ ಮೃತದೇಹಗಳನ್ನು ಹೊತ್ತ ವಿಮಾನದಲ್ಲಿ ಆಗಮಿಸಿದರು. ಕೇಂದ್ರ ಸಚಿವ ಸುರೇಶ್ ಗೋಪಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವರು ವಿಮಾನ ನಿಲ್ದಾಣದಲ್ಲಿ ಭಾವಪೂರ್ಣವಾಗಿ ಬರಮಾಡಿಕೊಂಡರು. ಸಚಿವರಾದ ವೀಣಾ ಜಾರ್ಜ್, ಪಿ ರಾಜೀವ್, ಕೆ ರಾಜನ್ ಮತ್ತು ರೋಶಿ ಆಗಸ್ಟಿನ್ ಕೂಡ ಪಾರ್ಥಿವ ಶರೀರವನ್ನು ಸ್ವೀಕರಿಸಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಕುಟುಂಬಸ್ಥರಿಗೆ ಹಸ್ತಾಂತರಿಸಿದ ನಂತರ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್, ಮೃತಪಟ್ಟ ಭಾರತೀಯರ ಮೃತಶರೀರಗಳನ್ನು ತರೆತರಲು ಭಾರತ ಸರ್ಕಾರ ಮತ್ತು ಕುವೈತ್‌ನ ಮಧ್ಯಸ್ಥಿಕೆ ಸಹಾಯ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಗಳಿಗೆ ಇದು ತುಂಬಲಾರದ ನಷ್ಟವಾಗಿದೆ. ಕುವೈತ್ ಸರ್ಕಾರವು ಪರಿಣಾಮಕಾರಿ ಮತ್ತು ನಿಷ್ಪಾಪ ಕ್ರಮಗಳನ್ನು ತೆಗೆದುಕೊಂಡಿದೆ, ದುರಂತದ ಬಗ್ಗೆ ತಿಳಿದಾಗ, ಭಾರತ ಸರ್ಕಾರವೂ ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡಿದೆ ಎಂದರು.

No Comments

Leave A Comment