ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಶಿರ್ವ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ : ಮಹಿಳೆ ಬಲಿ

ಶಿರ್ವ : ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಗುರುವಾರ ಸಂಭವಿಸಿದೆ.

ಮೃತ ಮಹಿಳೆಯನ್ನು ಸುರೇಶ್‌ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್‌ ನೊರೊನ್ಹಾ (76) ಎಂದು ಗುರುತಿಸಲಾಗಿದೆ. 

ಆಗ್ನೇಸ್‌ ನೊರೊನ್ಹಾ  ತಮ್ಮ ಅಕ್ಕನ ಮಗಳಾದ ಜೆಸಿಂತಾ ಮೆನೇಜಸ್‌ ಅವರೊಂದಿಗೆ ಪಡುಬೆಳ್ಳೆಯಿಂದ ಸುಬಾಸ್‌ ನಗರಕ್ಕೆ ಹೋಗುತ್ತಿರುವಾಗ ಎದುರಿನಿಂದ ಪಡುಬೆಳ್ಳೆ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಮನೋಜ್ ಎಂಬಾತ ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದು ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಅಟೋ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್‌ ನೊರೊನ್ಹಾ ರಿಕ್ಷಾದಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇತರೆ ಪ್ರಯಾಣಿಕರೂ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment