ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ ನಡೆಯಲಿದ್ದು ಈ ವೇಳೆ ಈ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದ ಅವರು 155 ಮಂದಿಗೆ (22 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು) ಪಿಎಚ್ ಡಿ ಡಾಕ್ಟರೇಟ್ ಪದವಿ, 58 ಚಿನ್ನದ ಪದಕ, 57 ನಗದು ಬಹುಮಾನ, 168 ರ್ಯಾಂಕ್ ಪದವಿ ಪ್ರದಾನ ನಡೆಯಲಿದೆ ಎಂದರು.

No Comments

Leave A Comment