ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಿಂದ ಕಮರಿಗೆ ಉರುಳಿದ ಟೆಂಪೋ; 12 ಮಂದಿ ಸಾವು

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.

ಟೆಂಪೋ ಟ್ರಾವೆಲರ್ ಜನಪ್ರಿಯ ಪ್ರವಾಸಿ ತಾಣವಾದ ಚೋಪ್ಟಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, “ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತವಾದ ದುಃಖದ ಸುದ್ದಿ ಬಂದಿದೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದರು.

ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಲಾಗಿದಿ ಎಂದು ಪುಷ್ಕರ್ ಸಿಂಗ್ ಧಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

No Comments

Leave A Comment