ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕುತೂಹಲ ಮೂಡಿಸಿದ ಆರ್ ಎಸ್ಎಸ್ ಮುಖ್ಯಸ್ಥ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ-2024 ರ ಫಲಿತಾಂಶದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದಿತ್ತು. ಪರಿಣಾಮ ಕೇಂದ್ರದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವನ್ನು ಏಕಾಂಗಿಯಾಗಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಆರ್ ಎಸ್ಎಸ್-ಬಿಜೆಪಿ ನಡುವೆ ಸಮನ್ವಯದ ಕೊರತೆ ಇದ್ದು, ಬಿಜೆಪಿಯ ಸೈದ್ಧಾಂತಿಕ ಮಾತೃಸಂಸ್ಥೆ ಆರ್ ಎಸ್ಎಸ್ ಕೇಂದ್ರ ಬಿಜೆಪಿಯ ನಾಯಕರು ಈ ಬಾರಿಯ ಚುನಾವಣೆ ನಡೆಸಿದ್ದ ರೀತಿಯ ಬಗ್ಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಕೆಲವು ದಿನಗಳ ಹಿಂದೆ ಆರ್ ಎಸ್ ಎಸ್ ನಾಯಕರು ಬಿಜೆಪಿ ಹೈಕಮಾಂಡ್ ನಾಯಕರ ವಿರುದ್ಧವೂ ಹೇಳಿಕೆ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್- ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲಿ ಆರ್ ಎಸ್ಎಸ್ ಕಾರ್ಯಕ್ರಮ ನಡೆಯುತ್ತಿದೆ ಆದ್ದರಿಂದ ಸಿಎಂ- ಆರ್ ಎಸ್ಎಸ್ ಮುಖ್ಯಸ್ಥರದ್ದು ಸೌಜನ್ಯ ಭೇಟಿ ಎಂದು ಹೇಳಲಾಗುತ್ತಿದೆ.

No Comments

Leave A Comment