ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬೆಂಗಳೂರು ; ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರಕಾರ.
ಬೆಂಗಳೂರು ; ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್ ಪ್ರೆಟೋಲ್ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ.
ವಿರೋಧ ಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡರೆ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂಬ ಕಾರಣಕ್ಕೆ ಸರ್ಕಾರ ದರ ಹೆಚ್ಚಿಸುವ ದುಸ್ಸಾಹಸಕ್ಕೆ ಮುಂದಾಗಿರಲಿಲ್ಲ. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ದರ ಹೆಚ್ಚಿಸುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಾದ ಅಗತ್ಯ ಇರುವ ಕಾರಣ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಂದಿದೆ.