ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ-ದರ್ಶನ್,ಪವಿತ್ರಾಗೌಡ ಸೇರಿದ೦ತೆ ಎಲ್ಲಾ ಆರೋಪಿಗಳು ಮತ್ತೆ 5ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನು ಹಲವು ಅಯಾಮಾಯಗಳಲ್ಲಿ ತನಿಖೆಯನ್ನು ನಡೆಸುವ ಅಗತ್ಯವಿರುದರಿ೦ದ ಬಂಧಿತ ಆರೋಪಿಗಳಿಗೆ ಮತ್ತೆ 5ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯ ಮುಚ್ಚಿರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರುಪಡಿಸಬೇಕಾಗುತ್ತದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಇಂದೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

No Comments

Leave A Comment