ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಾಜ್ಯ ರೇಣುಕಾಸ್ವಾಮಿ ಕೊಲೆ ಕೇಸ್’ಗೆ ಟ್ವಿಸ್ಟ್: ಹತ್ಯೆಗೂ ಮುನ್ನ ಆರೋಪಿಗಳು ಕೊಟ್ಟಿದ್ರೂ ಎಲೆಕ್ಟ್ರಿಕ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್​ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್ ಮತ್ತು ಗ್ಯಾಂಗ್​ ರೇಣುಕಾ ಸ್ವಾಮಿಗೆ ನೀಡಿದ್ದ ರಾಕ್ಷಸ ರೀತಿಯ ಚಿತ್ರಹಿಂಸೆಯ ವಿವರ ಹೊರಬಿದ್ದಿದೆ.

ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು, ಈ ಹಂತದಲ್ಲಿ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿ, ನ್ಯಾಯಾಲಯದ ಗಮನಕ್ಕೆ ತಂದ ಅಂಶವೆಂದರೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂಬುದು.

ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್​ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ್ದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು. ಅಲ್ಲದೆ, ಮೈಸೂರಿನಲ್ಲಿ ಕೆಲವು ಕಡೆ ಆರೋಪಿಯೊಟ್ಟಿಗೆ ಮಹಜರು ಮಾಡಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಸಹ ವಾದಿಸಿದ್ದಾರೆ.

ರೇಣುಕಾಸ್ವಾಮಿ ಅವರ ಶವದ ಗುರುತು ಸಿಗದಂತೆ ಮಾಡಲು 30 ಲಕ್ಷ ರೂಪಾಯಿ ಆಮಿಷ ಒಡ್ಡಲಾಗಿತ್ತು. ಇದನ್ನು ವಶಪಡಿಸಿಕೊಳ್ಳಲಾಗಿದೆ. 10 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಿ ಡಿ ಯನ್ನು ನ್ಯಾಯಾಲಯ ಪರಿಶೀಲಿಸಬಹುದಾಗಿದೆ. 5 ಮತ್ತು 13ನೇ ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿದ್ದಾರೆ. ಇದಕ್ಕೆ ಬಳಕೆ ಮಾಡಿರುವ ವಸ್ತುವನ್ನು ವಶಪಡಿಸಿಕೊಳ್ಳಬೇಕಿದೆ. ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯ ಇರುವುದರಿಂದ 9 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ದರ್ಶನ್‌ ಪರವಾಗಿ ವಕೀಲ ಅನಿಲ್‌ ಬಾಬು ವಕಾಲತ್ತು ಹಾಕಿದ್ದು, ಪೊಲೀಸ್‌ ಕಸ್ಟಡಿಗೆ ನೀಡುವುದಕ್ಕೆ ಆಕ್ಷೇಪಿಸಿದರು.

ಈ ನಡುವೆ ಪ್ರಕರಣ ಸಂಬಂಧ ಕೆಲವು ಆರೋಪಿಗಳು, ರೇಣುಕಾ ಸ್ವಾಮಿ ಕೊಲೆಯಾದ ದಿನ ನಡೆದ ಘಟನೆಗಳನ್ನು ಈಗಾಗಲೇ ವಿವರಿಸಿದ್ದು, ಕೆಲವರು ಅಪ್ರೂವರ್ ಆಗಿ ಸಹ ಬದಲಾಗಿದ್ದಾರೆ ಎನ್ನಲಾಗುತ್ತಿದೆ.

ಏನಿದು ಪ್ರಕರಣ?

ದರ್ಶನ್‌ ಗೆಳತಿ ಪವಿತ್ರ ಗೌಡಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಜೂನ್‌ 8ರಂದು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆಯ ವಾಹನಗಳನ್ನು ನಿಲ್ಲಿಸುವ ಖಾಸಗಿ ಶೆಡ್‌ ಒಂದರಲ್ಲಿ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೈದಿರುವ ಆರೋಪ ದರ್ಶನ್‌ ಮತ್ತು ಸಹಚರರ ಮೇಲಿದೆ. ಆನಂತರ ಶವವನ್ನು ತಡರಾತ್ರಿ ಕಾಮಾಕ್ಷಿ ಪಾಳ್ಯ ಸಮೀಪದ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು ಎಂದು ಆರೋಪಿಲಾಗಿದೆ.

ಸ್ಥಳೀಯರಿಂದ ಅನಾಥ ಶವದ ಬಗ್ಗೆ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ಭೇದಿಸಿ, ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿದ್ದ ದರ್ಶನ್‌ ಅವರನ್ನು ಬಂಧಿಸಿದ್ದರು. ಅಂದೇ ಮೊದಲ ಆರೋಪಿ ಪವಿತ್ರ ಗೌಡರನ್ನು ಬಂಧಿಸಿದ್ದರು. ಇಡೀ ಪ್ರಕರಣದ ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.

ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201, 120ಬಿ (ಪಿತೂರಿ) ಮತ್ತು 34ರ ಅಡಿ ಪ್ರಕರಣ ದಾಖಲಿಸಲಾಗಿದೆ.

No Comments

Leave A Comment