ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ, ನರರೋಗ ತಜ್ಞ ಡಾ.A.ರಾಜಾ ನಿಧನ
ಉಡುಪಿ: ಹಿರಿಯ ವೈದ್ಯ, ನರರೋಗ ತಜ್ಞರಾದ ಡಾ.A . ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು.
ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಡಾ.ರಾಜ್ ನಿಧನಕ್ಕೆ ಉಡುಪಿಯ ಆದರ್ಶನ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಜಿ ಎಸ್ ಚ೦ದ್ರಶೇಖರ್ ಹಾಗೂ ವೈದ್ಯವೃ೦ದದವರು ಹಾಗೂ ಕರಾವಳಿಕಿರಣ ಡಾಟ್ ಕಾ೦ ಬಳಗ ಮತ್ತು ಅಪಾರ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.