ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ 10 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
‘ಸದ್ಯ ವಶಕ್ಕೆ ಪಡೆದಿರುವ 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ. ಭೈನಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಹಸು ಕಳ್ಳಸಾಗಣೆಯ ಕೇಂದ್ರವಾಗಿತ್ತು. ಮಧ್ಯ ಪ್ರದೇಶದಲ್ಲಿ ಗೋಹತ್ಯೆ ಮಾಡುವುದು ಅಪರಾಧವಾಗಿದ್ದು, ಏಳು ವರ್ಷಗಳ ಜೈಲು ಶಿಕ್ಷೆಗೆ ಅರ್ಹವಾಗಿದೆ’ ಎಂದು ಸಕ್ಲೇಚಾ ತಿಳಿಸಿದರು.
ಇಬ್ಬರು ಆರೋಪಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಸಂಗ್ರಹಿಸಲಾಗಿದ್ದು, ಉಳಿದ ವ್ಯಕ್ತಿಗಳ ಪೂರ್ವಾಪರಗಳನ್ನು ಕಂಡುಹಿಡಿಯಲು ತನಿಖೆ ಕೈಗೊಳ್ಳಲಾಗಿದೆ. ಆರೋಪಿಗಳೆಲ್ಲರೂ ಮುಸ್ಲಿಮರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.