ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ
ಶಿವಮೊಗ್ಗ, ಜೂನ್ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.