ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ದರ್ಶನ್ ಪ್ರಕರಣ: ನಟ ಚಿಕ್ಕಣ್ಣಗೂ ನೋಟಿಸ್ ಕೊಟ್ಟ ಪೊಲೀಸರು
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್ ನೀಡಿದ್ದಾರೆ. ಅಷ್ಟಕ್ಕೂ ಅವರಿಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ನಟ ದರ್ಶನ್ ಶೆಡ್ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ನೋಟಿಸ್ ನೀಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ 19 ಮಂದಿ ಬಂಧನ ಆಗಿದೆ. ಈ ಕೇಸ್ನಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.
ದರ್ಶನ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆದಾಗ ದರ್ಶನ್ ಅವರು ಸಿನಿಮಾ ನೋಡಿ ಚಿಕ್ಕಣ್ಣಗೆ ಬೆಂಬಲ ನೀಡಿದ್ದರು. ದರ್ಶನ್ ಅವರ ಅನೇಕ ಪಾರ್ಟಿಗಳಲ್ಲಿ ಚಿಕ್ಕಣ್ಣ ಭಾಗಿ ಆಗಿದ್ದಿದೆ.