Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ವೃದ್ಧ ತಂದೆ-ತಾಯಿಯನ್ನು ಕರೆದೊಯ್ತಿದ್ದಾಗ ಬೈಕ್ ಗೆ ಟ್ರಕ್ ಡಿಕ್ಕಿ: ಸವಾರರನ್ನು 200 ಮೀಟರ್ ಎಳೆದೊಯ್ದಿದ್ದು ಇಬ್ಬರು ದುರ್ಮರಣ

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದು ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದನು.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದಿದ್ದು ಆರೋಪಿ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಪುರ್ನಿಯಾ ನಗರದ ಮಹಾಮಾಯಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತ ದಂಪತಿಯನ್ನು 72 ವರ್ಷದ ಲಾಲು ಓರಾನ್ ಮತ್ತು 65 ವರ್ಷದ ಪಾರ್ವತಿ ದೇವಿ ಎಂದು ಗುರುತಿಸಲಾಗಿದೆ. ಅವರ ಮಗ 23 ವರ್ಷದ ಸಿಲ್ವೆಸ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಭಾನುವಾರ ಸಂಜೆ 4 ಗಂಟೆಗೆ ಸಿಲ್ವೆಸ್ಟರ್ ತನ್ನ ಪೋಷಕರೊಂದಿಗೆ ಬೈಕ್‌ನಲ್ಲಿ ಜೀಲ್ ಟೋಲಾ ಗ್ರಾಮದಿಂದ ಹೊರಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರ್ಗಮಧ್ಯೆ ವೇಗವಾಗಿ ಬಂದ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸಮೇತ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಟ್ರಕ್ ನಿಲ್ಲದೆ ಮುಂದೆ ಸಾಗಿದೆ. ಟ್ರಕ್ ಮೂವರನ್ನೂ 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದೆ.

ಸದ್ಯ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರಿಗೆ ಅಲ್ಲಿ ರೋದನ ಮುಗಿಲು ಮುಟ್ಟಿತ್ತು. ಅಪಘಾತದ ಸ್ಥಳ ಅತ್ಯಂತ ಭಯಾನಕವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಆರೋಪಿ ಟ್ರಕ್ ಚಾಲಕ ಪೊಲೀಸರ ವಶದಲ್ಲಿದ್ದಾನೆ. ಆತನ ವಿರುದ್ಧ ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

No Comments

Leave A Comment