Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಣಿಪಾಲ ಗಾಂಜಾ ಸೇವನೆ :5ಮ೦ದಿ nursing collage ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಣಿಪಾಲ: ದಿನಾಂಕ 10/06/2024 ರಂದು 18:00 ಗಂಟೆಯ ಸಮಯಕ್ಕೆ ಮಣಿಪಾಲ ಪೊಲೀಸ್‌ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಠಾಣಾ ಸಿಬ್ಬಂದಿಯವರಾದ, ಚನ್ನೇಶ, ಮಂಜುನಾಥ ಎಮ್‌ ಆರ್‌ ರವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಸದ್ರಿ ವಿದ್ಯಾರ್ಥಿಗಳಾದ ಮಣಿಪಾಲದ Udupi collage of nursing Manipalಇಲ್ಲಿನ ವಿದ್ಯಾರ್ಥಿಗಳೆ೦ದು ಹೇಳಲಾಗುತ್ತಿರುವ ಅಶೀಲ (20), ರೆನಜೋ ಎಸ್. ಚಂದ್ರಗಿರಿ(20), ಅಭಿನವ ಸುರೇಶ್(20), ಶ್ರೀಹರಿ(19), ಅಭಿಜಿತ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಆ ವರದಿಯಲ್ಲಿ ಇವರೆಲ್ಲ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 17ರ ಸೋಮವಾರ ಸ೦ಜೆ ಇವರು ವಾಸಿಸುತ್ತಿರುವ ಪಿಜಿ ಕಟ್ಟಡಕ್ಕೆ ಪೊಲೀಸರು ಬ೦ದು ಮಹಜರು ಮಾಡಿದ್ದಾರೆ೦ದು ತಿಳಿದು ಬ೦ದಿದೆ.

ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 15/06/2024 ರಂದು ದೃಢಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 147/2024 ಕಲಂ: 27 (b) NDPS act ರಂತೆ ಪ್ರಕರಣ ದಾಖಲಾಗಿರುತ್ತದೆ.

No Comments

Leave A Comment