Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ:ಹಿರಿಯ ನ್ಯಾಯವಾದಿ ಚೇರ್ಕಾಡಿ ವಿಜಯ ಹೆಗ್ಡೆ ನಿಧನ

ಉಡುಪಿ: ನಗರದ ಹಿರಿಯ ನ್ಯಾಯವಾದಿ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿರುವ ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಮ೦ಗಳವಾರದ೦ದು ತಮ್ಮ ಅ೦ಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರ ಅಕಾಲಿಕ ನಿಧನ ಪಕ್ಷಕ್ಕೆ ಸದಾ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ನ್ಯಾಯವಾದಿಗಳನ್ನು ಕಾಂಗ್ರೆಸ್ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲೆಂದು ಪ್ರಾರ್ಥಿಸುತ್ತಾ ಉಡುಪಿ ಜಿಲ್ಲಾ ಕಾಂಗ್ರೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment