ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ರಾಜ್ಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
2ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 12 ರಂದು ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಜೂನ್ 18 ರವರೆಗೆ ಅವರನ್ನು ವಶಕ್ಕೆ ನೀಡಿತ್ತು. 33 ವರ್ಷದ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.
ಮೇ 31 ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಹಾಸನ ಚುನಾವಣೆ ನಡೆದ ಒಂದು ದಿನದ ನಂತರ ಅವರು ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದರು. ಕೇಂದ್ರೀಯ ತನಿಖಾ ದಳದ ಮೂಲಕ ಎಸ್‌ಐಟಿ ಕೋರಿಕೆಯ ಮೇರೆಗೆ ಇಂಟರ್‌ಪೋಲ್‌ನಿಂದ ಈ ಹಿಂದೆ ಆತನ ಇರುವಿಕೆಯ ಬಗ್ಗೆ ಮಾಹಿತಿ ಕೋರಿ ‘ಬ್ಲೂ ಕಾರ್ನರ್ ನೋಟಿಸ್’ ನೀಡಲಾಗಿತ್ತು.