ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ, ತೂಗುದೀಪ ನಿವಾಸಕ್ಕೂ ಸಂಚಕಾರ!
ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ.
ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ್ದ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಪತ್ನಿ ವಿಜಯಲಕ್ಷ್ಮಿ ಅವರಿಗೂ ಕೂಡ ಸಂಕಷ್ಟ ಎದುರಾಗಿದೆ.
ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್‌ಗೆ ಸಂಬಂಧಿಸಿದ್ದಂತೆ ಎಫ್ಐಆಪ್ ದಾಖಲಾಗಿ, ಅಧಿಕಾರಿಗಳು ನೋಟಿಸ್ ಕೂಡ ನೀಡಿದ್ದರು. ಆದರೆ, ನಟ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ.
ಒಂದಲ್ಲಾ ಎರಡಲ್ಲಾ ಒಟ್ಟು ಐದು ನೋಟಿಸ್ ನೀಡಿದ್ದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಈ ಕೇಸ್ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಸ್ಥಾನದಲ್ಲಿದ್ದಾರೆ.
ನಟ ದರ್ಶನ್ ತೋಟವು ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಇದೆ. ಈ ಪ್ರಕರಣದಲ್ಲಿ ದರ್ಶನ್ರನ್ನು ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ಆದರೆ, ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ್ದರಿಂದ ನಟ ದರ್ಶನ್ನನ್ನು ಬಂಧನಕ್ಕೊಳಪಡಿಸಬೇಕಿತ್ತು. ಆದರೆ, ಸೆಲೆಬ್ರಿಟಿ ಆಗಿದ್ದರಿಂದ ವಿಚಾರಣೆಗೆ ಅವಕಾಶ ನೀಡಲಾಗಿತ್ತು. ನಟ ದರ್ಶನ್ ತಲೆಮರೆಸಿಕೊಳ್ಳದ ಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ಬಲವಂತವಾಗಿ ಬಂಧಿಸಿರಲಿಲ್ಲ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಈ ಕೇಸ್ ಅನ್ನು ಚುರುಕುಗೊಳಿದೆ. ಜೊತೆಗೆ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಇದಲ್ಲದೆ, ರಾಜಾಕಾಲುವೆ ಒತ್ತುವರಿ ಕೇಸ್ ಕೂಡ ಮರುಜೀವಕೊಂಡಿದ್ದು, ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿರುವ ಬಂಗಲೆಗೂ ಸಂಚಕಾರ ಬಂದಿರುವ ಹಾಗಿದೆ.
ಬೆಂಗಳೂರಿನಲ್ಲಿ 2016ರ ಬೃಹತ್ ಮಳೆಗೆ ನೀರು ಬಂದು ಕೊಚ್ಚಿ ಹೋಗುವ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸರಕಾರ ಮತ್ತು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ತೀರ್ಮಾನಿಸಿದ್ದವು.
ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಲ್ಲಿ ರಾಜ ಕಾಲುವೆ ಮೇಲೆ ಕಟ್ಟಲಾಗಿರುವ ದರ್ಶನ್ ಅವರ ತೂಗುದೀಪ ನಿವಾಸ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಎಸ್ ಎಸ್ ಆಸ್ಪತ್ರೆ ಸೇರಿಂದತೆ 67 ಕಟ್ಟಡಗಳನ್ನು ಪಟ್ಟಿ ಮಾಡಲಾಗಿತ್ತು. ಆದರೆ, ಹಣ ಮತ್ತು ಅಧಿಕಾರದ ಪ್ರಭಾವದಿಂದಾಗಿ ಇವರೆಲ್ಲರೂ ತಮ್ಮ ತಮ್ಮ ಮನೆಗಳನ್ನು ಉಳಿಸಿಕೊಂಡಿದ್ದರು. ಕಟ್ಟಡಗಳನ್ನು ಕೆಡವದಂತೆ ತಡೆಯಾಜ್ಞೆ ತರಲು ಇವರಿಗೆ ಸರ್ಕಾರವೇ ಪರೋಕ್ಷವಾಗಿ ನೆರವಾಗಿತ್ತು. ತಡೆಯಾಜ್ಞೆ ತಂದು 8 ವರ್ಷಗಳಾಗಿದ್ದು, ಇದುವರೆಗೂ ಸರಕಾರ ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ.
ಇದೀಗ ಬಿಬಿಎಂಪಿ ದರ್ಶನ್ ಸೇರಿದಂತೆ ಅನೇಕ ಮಂದಿ ಹೈಕೋರ್ಟ್ ನಿಂದ ತಂದಿರುವ ತಡೆಯಾಜ್ಞೆಗಳನ್ನು ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಇದುವರೆಗೂ ತಡೆಯಾಜ್ಞೆ ನೀಡಿದ್ದ ಅವಧಿ ಎಷ್ಟು ಎಂದು ಯಾರಿಗೂ ತಿಳಿದಿರಲಿಲ್ಲ. ಈಗ ಮತ್ತೆ ಪರಿಶೀಲಿಸಿ ತಡೆಯಾಜ್ಞೆಯನ್ನು ತೆರವುಗೊಳಿಸಿ ಈ ಕಟ್ಟಡಗಳನ್ನು ಧ್ವಂಸಗೊಳಿಸಲು ಬಿಬಿಎಂಪಿ ಪ್ರಯತ್ನ ನಡೆಸಲಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.