ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯವಿರುದ್ಧ ಅವಹೇಳನಕಾರಿ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತೈಲ ಬೆಲೆ ಏರಿಕೆ ವಿರುದ್ದ ಪ್ರತಿಭಟಿಸಿದ್ದ ಬಿಜೆಪಿ
ಹೌದು, ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ, ಅಶ್ವತ್ಥನಾರಾಯಣ್ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು.