ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ, ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಸಾವು

ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕರ ಹೆಸರು ಶತ್ರುಘ್ನ ವಿಶ್ವಕರ್ಮ.

25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋದ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿದರು. ಅವರೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ ಕಾಜಪುರ ಗ್ರಾಮದ ನಿವಾಸಿಯಾಗಿದ್ದರು. SSF ನಲ್ಲಿ ಪೋಸ್ಟ್ ಮಾಡಲಾಗಿದೆ.

No Comments

Leave A Comment