ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ನೀಟ್ ಪರೀಕ್ಷೆ ಹಾಗೂ ಫಲಿತಾಂಶದಲ್ಲಿ ಅಕ್ರಮ ಮೋದಿ ಸರಕಾರದ ಹತ್ತು ವರ್ಷದ ದೊಡ್ಡ ಸಾಧನೆ- ಸುರೇಶ್ ಶೆಟ್ಟಿ ಬನ್ನಂಜೆ
ಉಡುಪಿ:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಇದು ಕೇಂದ್ರದ ಮೋದಿ ಸರಕಾರದ ವೈಫಲ್ಯದ ಕಾರಣ ಅಥವಾ ಕೇಂದ್ರ ಸರಕಾರದ ಕೈವಾಡ ಇದರಲ್ಲಿ ಇದೆಯ ಎಂಬ ಭಾವನೆ ನಮ್ಮ ದೇಶದ ವಿದ್ಯಾರ್ಥಿಗಳಲ್ಲಿ ಹುಟ್ಟು ಹಾಕಿದೆ ಇದಕ್ಕೆ ತಕ್ಕ ಉತ್ತರವನ್ನು ಸನ್ಮಾನ್ಯ ನರೇಂದ್ರ ಮೋದಿಯವರು ಕೂಡಲೇಕೊಡಬೇಕಾಗಿದೆ.
ಅಥವಾ ಹಿಂದಿನ ಕೇಂದ್ರ ಸರಕಾರದಲ್ಲಿ ಯಾರು ಇದಕ್ಕೆ ಸಂಬಂಧಪಟ್ಟ ಸಚಿವರು ಇದ್ದರು ಅವರನ್ನು ಸಂಪೂರ್ಣವಾಗಿ ತನಿಕೆಗೆ ಒಳಪಡಿಸಬೇಕು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ದೇಶದ ಎನ್ ಡಿ ಎ ಸರಕಾರ ಯೋಚಿಸಿ ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ.
ಇದರ ಬಗ್ಗೆ ಕೇಂದ್ರ ಸರಕಾರದಲ್ಲಿ ಭಾಗಿಯಾದ ರಾಜ್ಯ ಜೆಡಿಎಸ್ ಇದರ ಸಂಸದರು ಹಾಗೂ ಕೇಂದ್ರದ ಸಚಿವರು ಆದ ಮಾನ್ಯ ಕುಮಾರಸ್ವಾಮಿಯವರು ನಮ್ಮ ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪ್ರಶ್ನಿಸಲಿ ನಮ್ಮ ದೇಶದ ವಿದ್ಯಾರ್ಥಿಗಳಿಗೆ ನ್ಯಾಯವನ್ನು ಒದಗಿಸುವ ಕೆಲಸವನ್ನು ಮಾಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.