ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ರೇಣುಕಾ ಸ್ವಾಮಿ ಕೊಲೆ ಕೇಸ್: ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಪತ್ನಿ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೋರಾಟ ನಡೆಸುತ್ತಿದ್ದರು, ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು ಎನ್ನಲಾಗುತ್ತಿದೆ.
ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು ಎನ್ನಲಾಗುತ್ತಿದೆ.