ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಎಸ್‌ಪಿಪಿ ಬದಲಾವಣೆ ಇಲ್ಲ: ದರ್ಶನ್ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು
ಬೆಂಗಳೂರು, (ಜೂನ್ 19): ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಖಡಕ್ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೌದು…ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ಖಡಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, SPP ಪ್ರಸನ್ನಕುಮಾರ್ ಬದಲಾವಣೆಯ ಪ್ರಸ್ತಾಪವೇ ಆಗಿಲ್ಲ. ಈ ಬಗ್ಗೆ ನನಗೇನು ಗೊತ್ತಿಲ್ಲ. ದರ್ಶನ್ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ. ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ-ಕಂತೆ ಸುದ್ದಿಗಳಿಗೆ ತೆರೆ ಎಳೆದರು.
ಬೆಂಗಳೂರಿನಲ್ಲಿ ಇಂದು (ಜೂನ್ 19) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, SPP ಬದಲಾವಣೆ ಮಾಡಿ ಎಂದು ಯಾರೂ ಒತ್ತಡ ಹಾಕಿಲ್ಲ. ದರ್ಶನ್ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ.ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ. ಸಚಿವರು ಒತ್ತಡ ಹಾಕ್ತಿದ್ದಾರೆ ಅನ್ನೋದೆಲ್ಲ ಸತ್ಯ ಅಲ್ಲ. ವಿಪಕ್ಷದವರು ಹೇಳುವುದೆಲ್ಲಾ ಸತ್ಯನಾ? ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಸಾಮಾಜಿಕ ಜಾಲತಾಣಗಳ ಮೂಲಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಸನ್ನ ಕುಮಾರ್ ಮುಂದುವರೆಸಲು ಆಗ್ರಹ
ಇನ್ನು ದರ್ಶನ್ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರನ್ನು ಇದೀಗ ಬದಲಾವಣೆ ಮಾಡುವ ಸುದ್ದಿ ಹಬ್ಬಿದ ಬೆನ್ನಲ್ಲೇ ಜನಾಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರನ್ನು ಬದಲಾವಣೆ ಮಾಡಬಾರದು ಎಂದು ಆಗ್ರಹಗಳ ವ್ಯಕ್ತವಾಗಿತ್ತಿವೆ. ಇನ್ನು ಈ ಬಗ್ಗೆ ಚಲವಾದಿ ಮಠದ ಬಸವನಾಗಿದೇವ ಶ್ರೀ ಸಹ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರನ್ನೇ ಮುಂದುವರೆಸುವಂತೆ ಆಗ್ರಹಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿರುವ ಬಸವನಾಗಿದೇವ ಶ್ರೀ, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸರ್ಕಾರದಿಂದ ಉತ್ತಮ ನಿರ್ವಹಣೆಯಾಗುತ್ತಿದೆ. ಕೆಲವರಿಂದ ನ್ಯಾಯ ನೀತಿ ಧರ್ಮ ಮುಗ್ಗರಿಸಿ ಬೀಳಿಸುವ ಕೆಲಸವಾಗುತ್ತಿದೆ. ಸರ್ಕಾರ ಪ್ರಸನ್ನಕುಮಾರ್ ರನ್ನು SPPಯಾಗಿ ನೇಮಿಸಿದೆ. ಎಸ್‌ಪಿಪಿ ಪ್ರಸನ್ನಕುಮಾರ್ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡವಿದೆ. ಪ್ರಸನ್ನಕುಮಾರ ಕೈಬಿಡುವ ಪ್ರಸ್ತಾಪ ಉಗ್ರವಾಗಿ ಖಂಡಿಸುತ್ತೇವೆ. SPP ಪ್ರಸನ್ನ ಕುಮಾರ್ ಅವರನ್ನೇ ಮುಂದುವರೆಸಲು ಒತ್ತಾಯಿಸಿದರು.