ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ಕೋರ್ಟ್
ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.
ವಿಚಾರಣೆ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದರು ಮತ್ತು ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಹೇಳಿದರು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.