ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ಸಾವು
ಕೊಪ್ಪಳ, ಜೂನ್.20: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಸಿದ್ದಯ್ಯ ಹಿರೇಮಠ(32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು ಕೇದಾರನಾಥ ಯಾತ್ರೆಗೆ ತೆರಳಿದ್ದ ಅರ್ಚಕ ಸಿದ್ದಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಸಿದ್ದಯ್ಯ ಕಳೆದ 10 ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದರು. ಕೇದಾರನಾಥ ದರ್ಶನ ಮುಗಿಸಿ ಋಷಿಕೇಶ್ಗೆ ಬಂದಾಗ ಹೃದಯಾಘಾತ ಸಂಭವಿಸಿದೆ.
ಸಿದ್ದಯ್ಯ ಅವರು ಈ ಮೊದಲು ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಅರ್ಚಕರಾಗಿದ್ದರು. ಸದ್ಯ ಈಗ ಕೊಪ್ಪಳ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು. ಆದರೆ ಕೇದಾರನಾಥ ಯಾತ್ರೆಯಲ್ಲಿ ಮರಣ ಹೊಂದಿದ್ದಾರೆ.