ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ, ಇಬ್ಬರ ಸಾವು

ಹಾಸನ, ಜೂನ್ 20: ಹಾಸನದಲ್ಲಿ  ಹಾಡಹಗಲೇ ಗುಂಡಿನ  ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಎಸ್​ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್​ಎಸ್​​ಎಲ್​ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿಸಿದರು.

ಘಟನಾ ಸ್ಥಳದಲ್ಲಿದ್ದ ಕಾರು ಮೈಸೂರು ಮೂಲದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಕಾರಿನ ಹೊರಗಿರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಸೈಟ್​ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿರುವ ಮಾಹಿತಿ ಇದೆ. ಆದರೆ, ವಾಸ್ತವ ಏನೆಂಬುದು ತನಿಖೆಯ ನಂತರ ತಿಳಿಯಬೇಕಿದೆ ಎಂದು ಮೊಹಮ್ಮದ್ ಸುಜೀತಾ ತಿಳಿಸಿದರು.

No Comments

Leave A Comment