Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಬೆಂಗಳೂರು ಟರ್ಫ್ ಕ್ಲಬ್ ಪ್ರಕರಣ: ಕುದುರೆ ರೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ.

ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠವು ಇಂದು ಪ್ರಕಟಿಸಿತು.

ಕುದುರೆ ರೇಸ್‌ ಆಯೋಜನೆ ಮಾಡಲು ಬೆಂಗಳೂರು ಟರ್ಫ್‌ ಕ್ಲಬ್‌ಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿರುವ ಆದೇಶ ಸಕಾರಣದಿಂದ ಕೂಡಿದೆ. ಬೆಂಗಳೂರು ಟರ್ಫ್ ಕ್ಲಬ್‌ಗೆ ರೇಸ್‌ ಆಯೋಜಿಸಲು ಪರವಾನಗಿ ನೀಡಲು ನಿರಾಕರಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವ ಮೂಲಕ ಏಕಸದಸ್ಯ ಪೀಠವು ತಪ್ಪಾಗಿ ತೀರ್ಮಾನಿಸಿದೆ. ಮೇಲ್ನೋಟಕ್ಕೆ ತಮ್ಮ ಪರ ಪ್ರಕರಣವಿದೆ ಎಂದು ತೋರಿಸಲು ರಾಜ್ಯ ಸರ್ಕಾರ ಸಫಲವಾಗಿದೆ. ಈ ಕಾರಣಕ್ಕಾಗಿ ಏಕಸದಸ್ಯ ಪೀಠದ ಆದೇಶವನ್ನು ಅಮಾನತು ಮಾಡಿದ್ದು, ಅದಕ್ಕೆ ತಡೆ ನೀಡಲಾಗಿದೆ ಎಂದು ಆದೇಶಿಸಿದೆ.

ಅರ್ಜಿ ವಿಚಾರಣೆ ಬಾಕಿ ಇರುವಾಗ ಬೆಂಗಳೂರು ಟರ್ಫ್ ಕ್ಲಬ್‌ ಆಫ್‌-ಕೋರ್ಸ್‌, ಆನ್‌ ಕೋರ್ಸ್‌ ರೇಸ್‌ ಪಂದ್ಯಾವಳಿ ಮತ್ತು ಬೆಟ್ಟಿಂಗ್‌ ನಡೆಸುವುದನ್ನು ನಿಷೇಧಿಸಲಾಗಿದ್ದು, ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ. ಅಂತಿಮ ವಿಚಾರಣೆಯು ಆಗಸ್ಟ್‌ 13ಕ್ಕೆ ನಿಗದಿಗೊಳಿಸಲಾಗಿದೆ ಎಂದು ವಿಭಾಗೀಯ ಪೀಠ ಆದೇಶಿಸಿದೆ.

No Comments

Leave A Comment