ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

17 ನೂತನ ವಿಧಾನಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು, ಜಗದೇವ್ ಗುತ್ತೇದಾರ್, ಎನ್.ಎಸ್.ಬೋಸರಾಜು, ಡಾ. ಯತೀಂದ್ರ ಹಾಗೂ ಎ. ವಸಂತ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಪ್ರತಿಪಕ್ಷ ಬಿಜೆಪಿಯಿಂದ ಮುಲೆ ಮಾರುತಿರಾವ್, ಸಿ.ಟಿ. ರವಿ, ಎನ್.ರವಿಕುಮಾರ್ ಹಾಗೂ ಜೆಡಿಎಸ್ ನಿಂದ ಟಿ.ಎನ್.ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದ ರಾಮೋಜಿಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ.ಟಿ. ಶ್ರೀನಿವಾಸ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕ್ಷರ ಕ್ಷೇತ್ರದಿಂದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಕೆ. ವಿವೇಕನಾಂದ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ. ಟಿ. ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No Comments

Leave A Comment